ಕೆಮಿಕಲ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – ಹಲವರ ಸ್ಥಿತಿ ಗಂಭೀರ…

60
firstsuddi

ಬೆಂಗಳೂರು : ನಗರದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಅತ್ತಿಬೆಲೆ ಕೈಗಾರಿಕಾ ಪ್ರದೇಶದಲ್ಲಿನ ಲೇಕ್ ಕೆಮಿಕಲ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಪರಿಣಾಮ ಹಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದ್ದಾರೆ.

ಬಾಯ್ಲರ್ ಸ್ಫೋಟದಿಂದ ಹೊಗೆ 3 ಕಿ.ಮೀ ವ್ಯಾಪಿಸಿದೆ. ಬಾಯ್ಲರ್ ಬ್ಲಾಸ್ಟ್ ಗೆ ಇಡೀ ಪ್ರದೇಶದಲ್ಲಿ ಕೆಮಿಕಲ್ ವಾಸನೆ ಹರಡಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿರುವ ಜನರಲ್ಲಿ ಆತಂಕ ಎದುರಾಗಿದೆ.

ಈವರೆಗೆ ನಾಲ್ಕು ಬಾರಿ ಬಾಯ್ಲರ್ ಸ್ಫೋಟಗೊಂಡಿದ್ದು, ಇಲ್ಲಿ ಬಲ್ಕ್ ಡ್ರಗ್ ಕಚ್ಚಾ ಕೆಮಿಕಲ್ ತಯಾರಿಸುತ್ತಿದ್ದು ಮುಖ್ಯ ಕಾರ್ಖಾನೆಗಳಿಗೆ ರವಾನಿಸಲಾಗುತ್ತಿತ್ತು. ಕೂಡಲೇ ಕಂಪನಿ ಸ್ಥಳಾಂತರಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.