ಶಿವಮೊಗ್ಗ : ಸಾಗರ ತಾಲ್ಲೂಕಿನ ಕಾಸ್ಪಾಡಿ ಗ್ರಾಮದ ಬಳಿ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆಎಸ್ ಆರ್ ಟಿಸಿ ಬಸ್ಸೊಂದು ಕೆರೆಗೆ ಉರುಳಿ ಬಿದ್ದಿದೆ.
ಇಂದು ಮುಂಜಾನೆ ಬಸ್ ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿತ್ತು. ಈ ವೇಳೆ ಏಕಾಏಕಿ ಬೈಕ್ ಅಡ್ಡಬಂದಿದೆ. ಇದನ್ನು ತಪ್ಪಿಸಲು ಮುಂದಾದಾಗ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಬಸ್ಸಿನಲ್ಲಿದ್ದ 27 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಾಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದೀಪು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










