ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಮೂವರು ಜಲಸಮಾಧಿ…

63
firstsuddi

ರಾಮನಗರ : ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಸಿದ್ದಮ್ಮ(55), ಆಕೆಯ ಮಗಳು ಸುಮಿತ್ರಾ (30) ಮತ್ತು ಅಳಿಯ ಹನುಮಂತ ರಾಜು(35) ಮೃತ ದುರ್ದೈವಿಗಳು. ಬಾಲಕಿ ಕೀರ್ತನಾ (11) ಸ್ಥಿತಿ ಗಂಭೀರವಾಗಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಟ್ಟು ಐವರು ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದರು. ಆದರೆ ಮೃತ ಸುಮಿತ್ರಾಳ ಹತ್ತು ವರ್ಷದ ಮಗಳು ಚಂದನಾ ಅಲ್ಲಿಂದ ತಪ್ಪಿಸಿಕೊಂಡು ಬಂದು ಗ್ರಾಮಸ್ಥರಿಗೆ ಆತ್ಮಹತ್ಯೆ ವಿಷಯ ತಿಳಿಸಿದ್ದಾಳೆ. ಕೂಡಲೇ ಗ್ರಾಮಸ್ಥರು ಬಾಲಕಿಯನ್ನು ರಕ್ಷಿಸಿದ್ದಾರೆ. ಕೌಟುಂಬಿಕ ಕಲಹ ಹಿನ್ನಲೆ ಕುಟುಂಬಸ್ಥರೆಲ್ಲರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.