ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು…

120
firstsuddi

ಕೋಳಾರ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಅತ್ತಿಗಿರಿಕೊಪ್ಪ ಕೆರೆಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಅಜಾಮುದ್ದೀನ್ ಶರೀಪ್(18) ಹಾಗೂ ಅಶ್ವಕ್ ಅಹಮ್ಮದ್(17) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ಅತ್ತಿಗಿರಿಕೊಪ್ಪ ಕೆರೆಯಲ್ಲಿ ಈಜಲು ತೆರಳಿದ್ದು, ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬಂಗಾರಪೇಟೆ ಪೊಲೀಸರು ಸ್ಥಳ ಪರಿಶೀಲೆ ನಡೆಸಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿ ಓರ್ವ ಯುವಕನ ಮೃತದೇಹವನ್ನು ಹೊರತೆಗೆದಿದ್ದು, ಮತ್ತೋರ್ವ ಯುವಕನ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.