ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಮಕ್ಕಳ ಪ್ರಾಣ ಉಳಿಸಿ ಕೊನೆಯುಸಿರೆಳೆದ ತಾಯಿ…

60
firstsuddi

ತುಮಕೂರು: ಮಹಿಳೆಯೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಇಬ್ಬರು ಮಕ್ಕಳ ಪ್ರಾಣ ಉಳಿಸಿ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಿನ್ನೆ ಜಿಲ್ಲೆಯ ಶಿರಾ ತಾಲೂಕಿನ ರಥಸಂದ್ರ ಗ್ರಾಮದಲ್ಲಿ ನಡೆದಿದೆ.

ಮನು (30) ಸಾವನ್ನಪ್ಪಿದ ಮಹಿಳೆ. ಮನು ತನ್ನ ಇಬ್ಬರು ಮಕ್ಕಳ ಜೊತೆ ಬಟ್ಟೆ ತೊಳೆಯಲೆಂದು ಕೆರೆಗೆ ಹೋಗಿದ್ದರು. ಈ ವೇಳೆ ಆಟವಾಡುತ್ತಿದ್ದ ಮಕ್ಕಳು ಕೆರೆಗೆ ಜಾರಿ ಬಿದ್ದಿದ್ದಾರೆ. ಈ ವೇಳೆ ಈಜು ಬಾರದ ಮನು ತನ್ನ ಜೀವವನ್ನು ಲೆಕ್ಕಿಸದೆ ಕೆರೆಗೆ ಹಾರಿ ಮಕ್ಕಳನ್ನು ರಕ್ಷಿಸಿ ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಅಸ್ವಸ್ಥಗೊಂಡ ಇಬ್ಬರು ಮಕ್ಕಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.