ಮಂಡ್ಯ : ಕೆರೆಯಲ್ಲಿ ಹಸುಗಳಿಗೆ ನೀರು ಕುಡಿಸಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದಡಗ ಗ್ರಾಮದಲ್ಲಿ ನಡೆದಿದೆ. ಪುನೀತ್(10) ಹಾಗೂ ಮನು(12) ಮೃತ ಬಾಲಕರು ಎಂದು ಗುರುತಿಸಲಾಗಿದ್ದು, ಬಾಲಕರು ಇಂದು ಬೆಳಿಗ್ಗೆ ಬೆಳ್ಳೂರು ಹೋಬಳಿಯ ದಡಗ ಕೆರೆಯಲ್ಲಿ ತಮ್ಮ ಹಸುಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಇಬ್ಬರು ಬಾಲಕರು ಒಟ್ಟಿಗೇ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದು, ಸ್ಥಳದಲ್ಲಿ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಕುರಿತು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










