ಕೆಲಸ ಕೊಡಿಸೋದಾಗಿ ನಂಬಿಸಿ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದ ಪ್ರಿಯಕರ.

74
firstsuddi

ಬೆಂಗಳೂರು : ಕೆಲಸ ಕೊಡಿಸೋದಾಗಿ ನಂಬಿಸಿ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಪೊಲೀಸರು ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ನ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಯುವತಿ ಮಂಡ್ಯ ಮೂಲದವಳಾಗಿದ್ದು, ಮೂರ್ನಾಲ್ಕು ವರ್ಷಗಳ ಹಿಂದೆ ಆಕೆಯ ಪ್ರಿಯಕರನೇ ಕೆಲಸ ಕೊಡಿಸೋದಾಗಿ ಹೇಳಿ ಬೆಂಗಳೂರಿಗೆ ಕರೆ ತಂದಿದ್ದನು. ಬಳಿಕ ಮಂಜುಳಾ ಎಂಬ ಮಹಿಳೆಯ ಸಂಪರ್ಕಕ್ಕೆ ಪ್ರಿಯಕರ ಬಿಟ್ಟಿದ್ದ. ಈ ವೇಳೆ ಮಂಜುಳಾ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದಾಳೆ. ಅಲ್ಲದೇ ಆಕೆಯ ಮೇಲೆ ಹಲವರು ಏಕಕಾಲಕ್ಕೆ ದೌರ್ಜನ್ಯ ಎಸಗಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಮಂಜುಳಾ, ಬ್ರಹ್ಮೇಂದ್ರ ಹಾಗೂ ಲಾಡ್ಜ್ ಮಾಲೀಕ ಸಂತೋಷ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಸಂತ್ರಸ್ತ ಯುವತಿಯನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.