ಕೆ.ಎಸ್.ಆರ್.ಟಿ.ಸಿ ಬಸ್‍ಗೆ ಕಾರು ಡಿಕ್ಕಿ, ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು…

205
firstsuddi

ಮಂಡ್ಯ : ಕೆ.ಎಸ್.ಆರ್.ಟಿ.ಸಿ ಬಸ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಮದ್ದೂರಿನ ಗಜ್ಜಲಗೆರೆ ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ನಡೆದಿದೆ. ರವಿ(30), ಪತ್ನಿ ಮಂಜುಳಾ(28), ಹಾಗೂ ಮಕ್ಕಳಾದ ಸಾಗರ್(8), ಸುಕನ್ಯಾ(6) ಮೃತ ದುರ್ಧೈವಿಗಳು ಎನ್ನಲಾಗಿದ್ದು, ಮೃತರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತವಾಗಿ ನಿಂತಿದ್ದ ಕಾರನ್ನು ತಪ್ಪಿಸಲು ಹೋಗಿ ಕಾರು ಡಿವೈಡರ್‍ಗೆ ಡಿಕ್ಕಿಯಾದ ಪರಿಣಾಮ ಹೆದ್ದಾರಿಯಿಂದ ಇನ್ನೊಂದು ಕಡೆಗೆ ಹಾರಿದ್ದು, ಆ ಸಂದರ್ಭದಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‍ಗೆ ಕಾರು ಡಿಕ್ಕಿಯಾಗಿ ಈ ಘಟನೆ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸಂಚಾರಿ ಪಿಎಸ್‍ಐ ಮೋಹನ್ ಡಿ.ಪಟೇಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.