ತುಮಕೂರು : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಲ್ಲಸಂದ್ರ ಬಳಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಗುಬ್ಬಿಯಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಟೋ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.