ಬಾಗಲಕೋಟೆ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಬಳಿ ನಡೆದಿದೆ. ಸಿದ್ದರಾಯ ತೇಲಿ(36), ಬಾಲಪ್ಪ ಸೆಂಡಗಿ(34), ಹನುಮಂತ ಗನಗಾರ(21) ಹಾಗೂ ರಿಯಾಜ್ ಜಾಲಗೇರಿ(25) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತರೆಲ್ಲರೂ ಇಂದು ಬೆಳ್ಳಂಬೆಳಿಗ್ಗೆ ಕಾರಿನಲ್ಲಿ ಬೆಳಗಾವಿಯಿಂದ ಮುಧೋಳ ಮಾರ್ಗವಾಗಿ ಧಾರವಾಡಕ್ಕೆ ತೆರಳುತ್ತಿದ್ದ ವೇಲೆ ಕಲಬುರಗಿ ಕಡೆಗೆ ತೆರಳುತ್ತಿದ್ದ ಬಸ್ ಟ್ರ್ಯಾಕ್ಟರ್ ಓವರ್ ಟೇಕ್ ಮಾಡುವ ಭರದಲ್ಲಿ ಕಾರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಮುಧೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










