ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮಾಡಿ ಅವರ ರಾಜಕೀಯ ಪ್ರಬುದ್ಧ ನಡೆಯನ್ನು ಪ್ರಶಂಶಿಸಿದರು. ಅಲ್ಲದೇ ಪಕ್ಷ ಸದಾ ನಿಮ್ಮ ಜೊತೆ ಇದೆ ಎಂದು ಭರವಸೆ ನೀಡಿದರು.
ಕರೆಯಲ್ಲಿ ಏನಿದೆ?: ನೀವು ಬಿ.ಎಸ್ ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ತಿಳಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನೀವು ಪೋನ್ ಮಾಡಿದ್ದು ಖುಷಿಯಾಗಿದೆ. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ನೀವು ಕರೆ ಮಾಡಿದ್ದು ಬಹಳ ಖುಷಿ ಆಗಿದೆ ಎಂದರು.
ಕೆಲ ದಿನಗಳ ಹಿಂದೆ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಶಿವಮೊಗ್ಗ ಕ್ಷೇತ್ರಕ್ಕೆ ತಮ್ಮ ಪುತ್ರನಿಗೆ ಟಿಕೆಟ್ ಸಿಗುವ ಬಗ್ಗೆ ನಿರೀಕ್ಷೆಯಲ್ಲಿದ್ದರು. ಆದರೆ ಪುತ್ರನಿಗೆ ಟಿಕೆಟ್ ಸಿಗಲಿಲ್ಲ. ಹೀಗಾಗಿ ಈಶ್ವರಪ್ಪ ಅಸಮಾಧಾನಗೊಳ್ಳಬಹುದು ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಈಶ್ವರಪ್ಪ ಇದು ಯಾವುದಕ್ಕು ತಲೆ ಕೆಡಿಸಿಕೊಳ್ಳದೇ ಪಕ್ಷ ನಿಷ್ಠೆ ಮೆರೆದರು.










