ಚಿಕ್ಕಬಳ್ಳಾಪುರ : ನೆರೆ ನಷ್ಟಕ್ಕೆ ಕೇಂದ್ರ ಸರ್ಕಾರ ನಯಾಪೈಸೆ ಕೂಡ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ನೆರೆ ಪರಿಹಾರದ ಹೆಸರಿನಲ್ಲಿ ಬಿಡುಗಡೆ ಆಗಿರುವ ಹಣ ಹೆಚ್.ಡಿ. ಕುಮಾರಸ್ವಾಮಿ ಅವಧಿಯ ಬೇಡಿಕೆ. ಈಗಿನ ನೆರೆಯಿಂದ ಉಂಟಾದ ನಷ್ಟಕ್ಕೆ ಕೇಂದ್ರ ಸರ್ಕಾರದಿಂದ ನಯಾಪೈಸೆ ಕೂಡ ಬಿಡುಗಡೆಯಾಗಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ವೇಳೆ ನೆರೆ ಬಂದಿತ್ತು. ಆ ವೇಳೆ ಕೇಂದ್ರ ಸರ್ಕಾರಕ್ಕೆ 3,800 ಕೋಟಿ ರೂ ಬಿಡುಗಡೆ ಮಾಡುವಂತೆ ಕೇಳಿದ್ದರು. ಆ ಹಣದ 1,011 ಕೋಟಿ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಈಗಾ ಬಿಡುಗಡೆ ಮಾಡಿದೆ. ಈಗಿನ ನೆರೆಗೆ ಕೇಂದ್ರ ಸರ್ಕಾರ ಯಾವುದೇ ಪರಿಹಾರವನ್ನು ಬಿಡುಗಡೆ ಮಾಡಿಲ್ಲ. ರಾಜ್ಯ ಸಲ್ಲಿಸಿದ ವರದಿ ಕೇಂದ್ರದ ವರದಿಯೊಂದಿಗೆ ತಾಳೆಯಾಗುತ್ತಿಲ್ಲ. ಬಿ.ಎಸ್. ಯಡಿಯೂರಪ್ಪ ಅವರು ನೀಡಿರುವ ನೆರೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ಉತ್ತರ ಕನಾಟಕದ ನೆರೆಗೆ ಪರಿಹಾರವನ್ನು ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.










