ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…

140
firstsuddi

ಮಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೊದಲ ಬಾರಿಕೆ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದು, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಮಂಗಳೂರು ನಿವಾಸಕ್ಕೆ ಭೇಟಿ ನೀಡಿದರು. ಆಸ್ಕರ್ ಫರ್ನಾಂಡಿಸ್ ಅವರು ಅನಾರೋಗ್ಯದ ಕಾರಣದಿಂದ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ. ಆದ್ದರಿಂದ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನ ಆಸ್ಕರ್ ಫರ್ನಾಂಡಿಸ್ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದಾರೆ.