ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ, ಮೆಟ್ರೋ ದರ ಕಡಿಮೆ ಆಗಬೇಕು; ಸಚಿವ ಡಿ.ವಿ ಸದಾನಂದಗೌಡ.

31

ಮೈಸೂರು: ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ ಎಂದು ರಾಜ್ಯ ಸರ್ಕಾರದ ವಿರುದ್ದ ಮಾಜಿ ಸಚಿವ ಡಿ.ವಿ ಸದಾನಂದಗೌಡ ಅವರು ಬುಧವಾರ ವಾಗ್ದಾಳಿ ನಡೆಸಿದ್ದಾರೆ. ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಮಾತನಾಡಿದ ಅವರು, ಮೆಟ್ರೋ ದರ ಹೆಚ್ಚಳ ಸಂಬಂಧ ರಾಜ್ಯ ಸರ್ಕಾರ ವಿಶೇಷ ಒತ್ತಡ ಹಾಕುವುದು ಪ್ರಥಮ ಜವಾಬ್ದಾರಿ. ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ. ಮೆಟ್ರೋ ದರ ಕಡಿಮೆ ಆಗಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ರಾಜ್ಯ ಸರಕಾರ ಮೊದಲು ಒತ್ತಡ ಹಾಕಬೇಕು. ರಾಜ್ಯ ಸರ್ಕಾರ ಕರೆದರೆ ಕೇಂದ್ರದ ಬಳಿಗೆ ನಾವೂ ಜೊತೆಯಾಗಿ ಹೋಗುತ್ತೇವೆಂದು ಹೇಳಿದರು. ಉದಯಗಿರಿ ಪ್ರಕರಣ ಕುರಿತು ಪ್ರತಿಕ್ರಿಯಿಸಿ, ಯಾವಾಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತದೆಯೋ ಆಗೆಲ್ಲಾ ಒಂದು ಕೋಮಿನ ಜನರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೆ. ಪರಮೇಶ್ವರ್‍ಗೆ ಕಾನೂನು ಸುವ್ಯವಸ್ಥೆ ನಿಭಾಯಿಸಲು ಬರುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆಯಲ್ಲಿ ಬರೀ ಮುಡಾ ತುಂಬಿದೆ. ಸಿದ್ದರಾಮಯ್ಯ ಹೆಸರಿನಲ್ಲಿ ಇರುವ ಸಿದ್ದ ಎಂಬುದನ್ನು ತೆಗೆಯಬೇಕಾದ ಸ್ಥಿತಿ ಬಂದಿದೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಆದಾಗ ಬದಲಾಗಿದ್ದಾರೆ.