ನವದೆಹಲಿ : ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕೃತ ಟ್ವಿಟರ್ ಖಾತೆಯನ್ನು ಇಂದು ಬೆಳಗ್ಗೆ ಹ್ಯಾಕ್ ಮಾಡಲಾಗಿದ್ದು, ಹ್ಯಾಕರ್ ಗಳು ಸಚಿವಾಲಯದ ಟ್ವಿಟರ್ ಖಾತೆಯನ್ನು ಎಲೋನ್ ಮಸ್ಕ್ ಎಂದು ಬದಲಾಯಿಸಿದ್ದಾರೆ. ಟ್ವಿಟ್ಟರ್ ಖಾತೆ ಹ್ಯಾಕ್ ಮಾಡಿ, ಗ್ರೇಟ್ ಜಾಬ್ ಎಂದು ಟ್ವೀಟ್ ಮಾಡಿದ್ದರು. ಅಲ್ಲದೇ ಸ್ಪೇಸ್ ಎಕ್ಸ್ ಸಂಸ್ಥಾಪಕ ಎಲಾನ್ ಮಸ್ಕ್ ಅವರ ಥಂಬ್ ನೇಲ್ ಇರುವ ಕೆಲವು ಹೈಪರ್ಲಿಂಕ್ ಗಳನ್ನು ಪೋಸ್ಟ್ ಮಾಡಲಾಗಿದೆ.
ಆದರೆ ಕೆಲವೇ ಹೊತ್ತಿನಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಟ್ವಿಟರ್ ಖಾತೆಯ ಮೇಲೆ ನಿಯಂತ್ರಣ ಹೊಂದಿದ್ದು, ಹ್ಯಾಕರ್ಸ್ ಮಾಡಿದ್ದ ಟ್ವೀಟ್ ಗಳನ್ನೂ ಡಿಲೀಟ್ ಮಾಡಿದೆ. ಸದ್ಯ ಸಚಿವಾಲಯದ ಟ್ವಿಟರ್ ಖಾತೆಯನ್ನೀಗ ಭದ್ರಪಡಿಸಲಾಗಿದೆ.
2021ರ ಡಿಸೆಂಬರ್ 12ರಂದು ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿದ್ದ ಕಿಡಿಗೇಡಿಗಳು ಅದರಲ್ಲಿ ಬಿಟ್ ಕಾಯಿನ್ ಸಂಬಂಧಪಟ್ಟ ಟ್ವೀಟ್ ಗಳನ್ನು ಮಾಡಿದ್ದರು.










