ಮಹಾರಾಷ್ಟ್ರ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಅಪರಿಚಿತ ವ್ಯಕ್ತಿ ಮೂರು ಬಾರಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ. ನಾಗ್ಪುರದಲ್ಲಿರುವ ಕಚೇರಿಗೆ ಬೆಳಿಗ್ಗೆ 11:25, 11:32 ಹಾಗೂ 12:30ಕ್ಕೆ ಮೂರು ಬಾರಿ ಬೆದರಿಕೆ ಕರೆಗಳು ಬಂದಿವೆ. ಕರೆ ಮಾಡಿದವರು ಗಡ್ಕರಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಕರೆಗಳನ್ನು ಸ್ವೀಕರಿಸಿದ ತಕ್ಷಣ ಕಚೇರಿಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಚಿವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.










