ಕೇಂದ್ರ ಸರ್ಕಾರದಿಂದ ಗರೀಬ್ ಕಲ್ಯಾಣ್ ರೋಜ್‍ಗಾರ್ ಯೋಜನೆ ಘೋಷಣೆ…

148
firstsuddi

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಕೆಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್ 20 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗರೀಬ್ ಕಲ್ಯಾಣ್ ರೋಜ್‍ಗಾರ್ ಯೋಜನೆಗೆ ಚಾಲನೆ ನೀಡಲಿದ್ದು, ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಒಡಿಶಾ ಹಾಗೂ ರಾಜಸ್ಥಾನದ 116 ಜಿಲ್ಲೆಗಳಿಗೆ ಮಾತ್ರ ನೆರವಾಗುವಂತೆ ಗರೀಬ್ ಕಲ್ಯಾಣ್ ರೋಜ್‍ಗಾರ್ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಗರೀಬ್ ಕಲ್ಯಾಣ್ ರೋಜ್‍ಗಾರ್ ಯೋಜನೆಯಿಂದಾಗಿ ಬಡ ವಲಸೆ ಕಾರ್ಮಿಕರಿಗೆ ವರ್ಷದಲ್ಲಿ ಕನಿಷ್ಠ 125 ದಿನಗಳ ಕಾಲ ಕೆಲಸ ಸಿಗಲಿದೆ ಎಂದು ತಿಳಿಸಿದರು.