ಕೇಂದ್ರ ಸರ್ಕಾರದ ನೋಟು ಅಮಾನ್ಯೀಕರಣ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ ಕೋರ್ಟ್.

48
firstsuddi

ನವದೆಹಲಿ : 2016ರಲ್ಲಿ 500 ಮತ್ತು 1000 ರೂ. ಮುಖಬೆಲೆ ನೋಟುಗಳನ್ನು ಅಮಾನ್ಯೀಕರಣ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ನೋಟು ಅಮಾನ್ಯೀಕರಣ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.

ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠವು ತೀರ್ಪು ಪ್ರಕಟಿಸಿದೆ. ನೋಟು ಅಮಾನ್ಯೀಕರಣ ಮಾಡಿರುವ ಕೇಂದ್ರದ ನಿರ್ಧಾರ ಸಮ್ಮತವಾಗಿದೆ. ಪ್ರಮಾಣಾನುಗುಣವಾದ ಆಧಾರದ ಮೇಲೆ ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ನೊಂದಿಗೆ ಸಮಾಲೋಚಿಸಿದ ನಂತರ ಕೇಂದ್ರವು ಕ್ರಮ ತೆಗೆದುಕೊಳ್ಳಬೇಕಾಗಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದರು. ಆದರೆ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಿನ್ನಾಭಿಪ್ರಾಯದ ತೀರ್ಪು ನೀಡಿ, ನೋಟು ರದ್ದತಿಯನ್ನು ಸಂಸತ್ತಿನ ಕಾಯಿದೆಯ ಮೂಲಕ ಕಾರ್ಯಗತಗೊಳಿಸಬಹುದಿತ್ತು, ಇದು ಸರ್ಕಾರದಿಂದ ಅಲ್ಲ ಎಂದು ಹೇಳಿದರು.