ಕೇಂದ್ರ ಸರ್ಕಾರದ ಪ್ರಮಾಣೀಕರಣದ ಬಳಿಕ ಮಕ್ಕಳಿಗೆ ಕೊರೊನಾ ಲಸಿಕೆ : ಸಿಎಂ ಬೊಮ್ಮಾಯಿ.

71
firstsuddi

ಉಡುಪಿ : ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದ ಪ್ರಮಾಣೀಕರಣದ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಶೇ. 82ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಶೇ 90ರಷ್ಟು ಜನರಿಗೆ ಮೊದಲ ಡೋಸ್ ಕೊಡುತ್ತೇವೆ. ಹಾಗೂ ಶೇ 75 ರಷ್ಟು ಎರಡನೇ ಡೋಸ್ ಲಸಿಕೆಯನ್ನು ಹಾಕುವ ಗುರಿಯನ್ನು ಹೊಂದಲಾಗಿದೆ. 2ರಿಂದ 18 ವರ್ಷದೊಳಗಿನ ಮಕ್ಕಳ ಕೋವಿಡ್ ಲಸಿಕೆ ಪರೀಕ್ಷೆ ಕೊನೆಯ ಹಂತ ತಲುಪಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಲಸಿಕೆ ನೀಡಲು ಅನುಮತಿ ಕೊಡುತ್ತೇವೆ ಎಂದರು.

ರಾಜ್ಯದಲ್ಲಿ ಈಗಾಗಲೇ ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಸರ್ಕಾರದ ಚಿಂತನೆ ನಡೆಸಿದೆ. ಆದಷ್ಟು ಬೇಗ ಮತಾಂತರ ನಿಷೇಧಕ್ಕೆ ಕ್ರಮಕೈಗೊಳ್ಳುತ್ತೇವೆ ಎಂದು ನುಡಿದರು.