ಕೇರಳದಲ್ಲಿ ಏರ್ ಇಂಡಿಯಾ ವಿಮಾನ ಪತನ-20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಾವು…

223
firstsuddi

ತಿರುವನಂತಪುರಂ : 190 ಮಂದಿ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡು 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಕೇರಳದ ಕೋಯಿಕ್ಕೋಡ್‍ನ ಪರಿಪುರ ಏರ್‍ಪೋರ್ಟ್‍ನಲ್ಲಿ ನಡೆದಿದೆ. ದುಬೈಯಿಂದ ಕೋಯಿಕ್ಕೋಡ್‍ಗೆ ಆಗಮಿಸಿದ ವಿಮಾನ ಲ್ಯಾಂಡಿಂಗ್ ವೇಳೆ ಮಳೆಯಿದ್ದ ಕಾರಣ ರನ್‍ವೇಯಿಂದ ಪ್ರಪಾತಕ್ಕೆ ಜಾರಿ ಎರಡು ಭಾಗವಾಗಿದ್ದು, ಪರಿಣಾಮ ವಿಮಾನದಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 123 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ ಹಾಗೂ 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  

ಘಟನೆ ಸಂಭವಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಂದ ಮಾಹಿತಿ ಪಡೆದಿದ್ದಾರೆ. ಕೋಯಿಕ್ಕೋಡ್ ಮತ್ತು ಮಲ್ಲಪುರಂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಲ್ಲದೇ ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲಾ ಸೇವೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಾಹಿತಿ ನೀಡಿದ್ದಾರೆ.