ಕೇರಳದಲ್ಲಿ ಭಾರಿ ಮಳೆ, ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದ್…

251
firstsuddi

ತಿರುವನಂತಪುರಂ : ದೇವರ ನಾಡು ಎಂದು ಕರೆಯಲ್ಪಡುವ ಕೇರಳದಲ್ಲಿ ಬಾರಿ ಮಳೆಯಿಂದಾಗಿ ಮತ್ತೆ ಸಂಕಷ್ಟ ಎದುರಾಗಿದ್ದು, ಕೇರಳದ ವರಿಯಾರ್ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಈ ಹಿನ್ನೆಲೆ, ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಆಗಸ್ಟ್ 11 ರವರೆಗೆ ಬಂದ್ ಮಾಡಲಾಗಿದೆ ಎಂದು ಕೊಚ್ಚಿ ವಿಮಾನ ನಿಲ್ದಾಣದ ಅಧಿಕಾರಿಗಳು ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ ತಿಳಿಸಿದ್ದಾರೆ. ಕೇರಳದ ತ್ರಿಶೂರ್, ಪಾಲಕ್ಕಾಡ್, ವಯನಾಡು, ಕಾಸರಗೋಡು, ಇಡುಕ್ಕಿ, ಕಣ್ಣೂರು, ಎರ್ನಾಕುಲಂ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.