ಕೇರಳದಲ್ಲಿ ಭೀಕರ ರಸ್ತೆ ಅಪಘಾತ-ಚಿತ್ರದುರ್ಗ ಮೂಲದ ಇಬ್ಬರು ಸ್ಥಳದಲ್ಲೇ ಸಾವು…

215
firstsuddi

ಕೇರಳ : ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಚಿತ್ರದುರ್ಗ ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೇರಳದ ವಾಲೆಂಕೇರಿ ಸಮೀಪದ ಪಂಡಿಕಸಲ ಚೋಲಾವಲವು ಎಂಬಲ್ಲಿ ನಡೆದಿದೆ. ಎ. ಪಾಂಡುರಂಗ(37), ಹಾಗೂ ಪ್ರಭಾಕರ್(52) ಮೃತ ದುರ್ದೈವಿಗಳು ಗುರುತಿಸಲಾಗಿದ್ದು, ಮೃತರು ಕಳೆದ ಮೂರು ದಿನಗಳ ಹಿಂದೆ ಪ್ರವಾಸಕ್ಕೆಂದು ಕೇರಳಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯಲ್ಲಿ ಇನ್ನೂ 4ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ವಾಲೆಂಕೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಸ್ಥಳಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.