ತಿರುವನಂತಪುರಂ : ಕೇರಳದಲ್ಲಿ 3 ವರ್ಷದ ಮಗುವಿನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಈ ಕುರಿತು ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದೆ. ಮಗು ತನ್ನ ಪೋಷಕರೊಂದಿಗೆ ಮಾರ್ಚ್7 ರಂದು ದುಬೈಯಿಂದ ವಾಪಸ್ಸಾಗಿತ್ತು. ಈ ವೇಳೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬಂದವರನ್ನು ತಪಾಸಣೆ ನಡೆಸುತ್ತಿದ್ದಾಗ ಮಗುವಿಗೆ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿದ್ದು, ಮಗುವಿಗೆ ಎರ್ನಾಕುಲಂ ಮೆಡಿಕಲ್ ಕಾಲೇಜಿನ ಐಸೋಲೇಶನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಬೆಂಗಳೂರಿನಲ್ಲೂ ಕೊರೊನಾ ಭೀತಿ ಹೆಚ್ಚಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಬೆಂಗಳೂರಿನ ಎಲ್‍ಕೆಜಿ, ಯುಕೆಜಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.