ಕೇರಳದಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ…

53
firstsuddi

ನವದೆಹಲಿ : ಕೇರಳದಲ್ಲಿ ಮತ್ತೋರ್ವನಿಗೆ ಮಂಕಿಪಾಕ್ಸ್ ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಪತ್ತೆಯಾಗಿರುವ ಐದನೇ ಪ್ರಕರಣ ಇದಾಗಿದೆ. 

ಜುಲೈ 27ರಂದು ಯುಎಇಯಿಂದ ಕೇರಳದ ಮಲಪ್ಪುರಂನ ಯುವಕ ಕೋಯಿಕ್ಕೋಡ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ. ಈ ವೇಳೆ ನಡೆಸಿದ ಪರೀಕ್ಷೆಯಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದವು. ಬಳಿಕ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಇಂದು ಆ ಯುವಕನ ವರದಿ ಪಾಸಿಟಿವ್ ಬಂದಿದೆ. ಆತನೊಂದಿಗೆ ನಿಕಟ ಸಂಪರ್ಕದಲ್ಲಿದ್ದ ತಾಯಿ, ತಂದೆ ಮತ್ತು ಇಬ್ಬರು ಸ್ನೇಹಿತರ ಮೇಲೂ ನಿಗಾ ಇರಿಸಲಾಗಿದೆ. ಮಂಕಿಪಾಕ್ಸ್ ಸೋಂಕಿತನಿಗೆ ಪ್ರಸ್ತುತ ಮಲಪ್ಪುರಂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಇಂದು ಎರಡನೇ ಪ್ರಕರಣ ದಾಖಲಾಗಿದ್ದು, ಇದೀಗ ಭಾರತದಲ್ಲಿ ಪತ್ತೆಯಾಗಿರುವ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ 7ಕ್ಕೇರಿದೆ.

ಮಂಕಿಪಾಕ್ಸ್ ಗೆ ಭಾರತದಲ್ಲಿ ಮೊದಲ ಬಲಿ : ಯುಇಎಯಿಂದ ಬಂದಿದ್ದ ಕೇರಳದ 22 ವರ್ಷದ ಯುವಕ ತ್ರಿಶೂರ್ ನಲ್ಲಿ ಸಾವನ್ನಪ್ಪಿದ್ದಾನೆ. ಮೃತ ಯುವಕ ಯುಇಎಯಿಂದ ಭಾರತಕ್ಕೆ ಹಿಂದಿರುಗಿದಾಗ ಮಾಡಿಸಿದ ಪರೀಕ್ಷೆಯಲ್ಲಿ ಮಂಕಿಪಾಕ್ಸ್ ದೃಢವಾಗಿತ್ತು. ಆದರೂ ಮುಚ್ಚಿಟ್ಟು ಎಲ್ಲರೊಂದಿಗೆ ಬೆರೆತಿದ್ದ. ಜುಲೈ 26 ರಂದು ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.