ಕೇರಳ : ಒಂದೇ ಟ್ಯೂಷನ್ ನ 90 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು…

104
First Suddi

ತಿರುವನಂತಪುರಂ : ಒಂದೇ ಟ್ಯೂಷನ್ ನ 90 ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ತುತ್ತಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೇರಳದ ಮಲಪ್ಪುರಂನ 2 ಶಾಲೆಗಳಲ್ಲಿನ 192 ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಈ 192 ವಿದ್ಯಾರ್ಥಿಗಳ ಪೈಕಿ 90 ವಿದ್ಯಾರ್ಥಿಗಳು ಒಂದೇ ಟ್ಯೂಷನ್ ನ ವಿದ್ಯಾರ್ಥಿಗಳು ಎಂಬ ಸುದ್ದಿ ಬೆಳಕಿಗೆ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಇದೀಗ ಟ್ಯೂಷನ್ ಕೇಂದ್ರವನ್ನು ಸೀಲ್‌ಡೌನ್ ಮಾಡಲಾಗಿದ್ದು, ಆ ಟ್ಯೂಷನ್ ಕೇಂದ್ರಕ್ಕೆ ತೆರಳುತ್ತಿದ್ದ ಉಳಿದ ವಿದ್ಯಾರ್ಥಿಗಳನ್ನು ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಅಲ್ಲದೇ ಟ್ಯೂಷನ್ ಗೆ ಬರುತ್ತಿದ್ದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಮಾಡಲು ಸೂಚಿಸಲಾಗಿದೆ ಎಂದು ಶಿಕ್ಷಣ ಅಧಿಕಾರಿ ರಮೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಉಳಿದ ವಿದ್ಯಾರ್ಥಿಗಳ ಕೊರೊನಾ ಪರೀಕ್ಷೆ ಇಂದು ನಡೆಯಲಿದ್ದು, ಎಷ್ಟು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರಬಹುದು ಎಂದು ಪರೀಕ್ಷೆ ಬಳಿಕ ಮಾಹಿತಿ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇರಳದಿಂದ ಕರ್ನಾಟಕದ 5 ಜಿಲ್ಲೆಗಳಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟೀವ್ ಪ್ರಮಾಣ ಪತ್ರವನ್ನು ತರಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಉಡುಪಿ, ಮತ್ತು ಮೈಸೂರು ಜಿಲ್ಲೆಗಳಿಗೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳು ಕೋವಿಡ್ ನೆಗೆಟೀವ್ ಪ್ರಮಾಣ ಪತ್ರ ತರಬೇಕು. ಕೇರಳದಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ 15 ದಿನಕ್ಕೊಮ್ಮೆ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.