ಕೈತಪ್ಪಿದ ಮೊಳಕಾಲ್ಮೂರು ಕಾಂಗ್ರೆಸ್ ಟಿಕೆಟ್- ಕಣ್ಣೀರಿಟ್ಟ ಆಕಾಂಕ್ಷಿ ಯೋಗೀಶ್ ಬಾಬು.

55
firstsuddi

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯೋಗೀಶ್ ಬಾಬು ಅವರು ಬೆಂಬಲಿಗರ ಸಭೆಯಲ್ಲಿ ಕಣ್ಣೀರಿಟ್ಟಿದ್ದಾರೆ.

2018ರ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯೋಗೀಶ್ ಬಾಬು, ಈ ಬಾರಿ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ ಅವರನ್ನು ಕಡೆಗಣಿಸಿ ಕೇವಲ ಒಂದು ವಾರದ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಎನ್ ವೈ ಗೋಪಾಲಕೃಷ್ಣಗೆ ಟಿಕೆಟ್ ನೀಡಲಾಗಿದೆ.

ನಿನ್ನೆ ಸಂಜೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಯೋಗೀಶ್ ಬಾಬು ಮುಂದಿನ ನಿರ್ಧಾರ ಕೈಗೊಳ್ಳಲು ಬೆಂಬಲಿಗರ ಸಭೆ ನಡೆಸಿದ್ದರು. ಈ ವೇಳೆ ಗದ್ಗದಿತರಾದ ಯೋಗೀಶ್ ಬಾಬು ನಿಮ್ಮ ಅಭಿಮಾನ, ಪ್ರೀತಿ ಬಾಂಧವ್ಯ ಸದಾ ಹೀಗೆ ಇರಲಿ ಎಂದರು. ಸಭೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬೆಂಬಲಿಗರಿಂದ ಸಲಹಗಳು ಬಂದಿವೆ. ಅಲ್ಲದೇ ಸಭೆಯುದ್ದಕ್ಕೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ‘ಕೈ’ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.