ಬೆಂಗಳೂರು : ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಸ್ವತಃ ತಮ್ಮ ಕೈ ಬರಹದಲ್ಲೇ ರಾಜೀನಾಮೆ ಪತ್ರ ಬರೆದು ಫ್ಯಾಕ್ಸ್ ಮೂಲಕ ಕಳುಹಿಸಿದ್ದು, ಕಾಂಗ್ರೆಸ್ ಪಕ್ಷದ 2ನೇ ವಿಕೆಟ್ ಪತನವಾಗಿದ್ದು, ರಾಜೀನಾಮೆ ಪತ್ರದಲ್ಲಿ ದಿನಾಂಕ 01/07/2019ರಂದು ಇಂದು ನನ್ನ ಗೋಕಾಕ್ ವಿಧಾನಸಭಾ ಕ್ಷೇತ್ರದ ಸದಸ್ಯತ್ವ ಸ್ಥಾನಕ್ಕೆ ಸ್ವಇಚ್ಚೆಯಿಂದ ರಾಜಿನಾಮೆ ನೀಡುತ್ತಿದ್ದೇನೆ ಎಂದು ಬರೆದಿದ್ದು, ನಾಳೆ ಸ್ಪೀಕರ್ ಭೇಟಿಯಾಗಲಿದ್ದೇನೆ ಎಂದು ಹೇಳಿದ್ದಾರೆ. ನಾಳೆ ಅಮವಾಸ್ಯೆ ಇದ್ದ ಹಿನ್ನೆಲೆ ಇಂದು ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.











