ಕೊಪ್ಪಳ : ಆ್ಯಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ..!

143
firstsuddi

ಕೊಪ್ಪಳ : ಆ್ಯಂಬುಲೆನ್ಸ್ ನಲ್ಲಿಯೇ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಶಾಖಾಪುರದಲ್ಲಿ ನಡೆದಿದೆ.

ಪುಷ್ಪಾ(38) ಎಂಬವರಿಗೆ ಬೆಳ್ಳಂಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಯ ಕುಟುಂಬಸ್ಥರು 108ಕ್ಕೆ ಕರೆ ಮಾಡಿದ್ದಾರೆ. ಶಾಖಾಪುರದಿಂದ ಕುಷ್ಟಗಿ ತಾಲ್ಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲೇ ಮಹಿಳೆಗೆ ಹೆರಿಗೆ ನೋವು ಜಾಸ್ತಿಯಾಗಿದ್ದರಿಂದ 108 ಆ್ಯಂಬುಲೆನ್ಸ್ ನ ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್ ಭೀಮಣ್ಣ ಅವರು ಹೆರಿಗೆ ಮಾಡಿದ್ದಾರೆ. ಆ್ಯಂಬುಲೆನ್ಸ್ ನಲ್ಲಿಯೇ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿಗೆ ತಾಯಿ ಜನ್ಮ ನೀಡಿದ್ದಾಳೆ. ಸದ್ಯ ತಾಯಿ ಹಾಗೂ ಅವಳಿ ಮಕ್ಕಳನ್ನು ಕುಷ್ಟಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.