ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ – ಇಬ್ಬರ ಸ್ಥಿತಿ ಗಂಭೀರ…

77
firstsuddi

ಹಾವೇರಿ : ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಆರಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತಾಲ್ಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ.

ನಿನ್ನೆ ಗ್ರಾಮಸ್ಥರು ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದರು. ಈ ವೇಳೆ 58 ವರ್ಷದ ಮೈಲಾರಪ್ಪ ಗಜ್ಜಿ ಮತ್ತು ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಉಳಿದ ಆರಕ್ಕೂ ಹೆಚ್ಚು ಜನರಿಗೆ ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದನ ಬೆದರಿಸುವ ಸ್ಪರ್ಧೆಯಲ್ಲಿ ಅಖಾಡಕ್ಕೆ ಬಿಟ್ಟ ಹೋರಿ ಮೈಲಾರಪ್ಪನನ್ನ ಕೊಂಬಿನಿಂದ ತಿವಿದು ಮೇಲಕ್ಕೆತ್ತಿ ಕೆಳಕ್ಕೆ ಒಗೆದಿದೆ. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎರಡು ಎತ್ತುಗಳು ಸಹ ಗಾಯಗೊಂಡಿವೆ. ಅಖಾಡಕ್ಕೆ ಬಿಟ್ಟ ನಂತರ ಮರಳಿ ಜನರ ಮೇಲೆ ಜಿಗಿದು ಅಖಾಡದಿಂದ ಹೊರಗೋಡಿದ್ದರಿಂದ ಈ ದುರ್ಘಟನೆ ನಡೆದಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.