ಚೆನ್ನೈ : ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಕುರಿತಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಇಂದು ತಮಿಳುನಾಡಿನ 45ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದೆ.
ಅಕ್ಬೋಬರ್ 23ರಂದು ಮುಂಜಾನೆ 4.20ರ ಸುಮಾರಿಗೆ ತಮಿಳುನಾಡಿನ ಕೊಯಮತ್ತೂರಿನ ಈಶ್ವರನ್ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಎಲ್ ಪಿಜಿ ಸಿಲಿಂಡರ್ ಅಳವಡಿಸಿದ್ದ ಮಾರುತಿ 800 ಕಾರೊಂದು ಸ್ಫೋಟಗೊಂಡಿತ್ತು. ಈ ವೇಳೆ 25 ವರ್ಷದ ಜಮೀಶಾ ಮುಬಿನ್ ಎಂಬ ವ್ಯಕ್ತಿ ಮೃತಪಟ್ಟಿದ್ದನು. ಸ್ಫೋಟಕ್ಕೆ ಸಂಬಂಧಿಸಿದ ಶಂಕಿತರು ಮತ್ತು ಬೆಂಬಲಿಗರ ಆಸ್ತಿಗಳನ್ನು ಎನ್ ಐಎ ಪರಿಶೀಲನೆ ನಡೆಸುತ್ತಿದ್ದು, ಚೆನ್ನೈ ಹಾಗೂ ಕೊಯಮತ್ತೂರಿನ ಹಲವು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.










