ಬೆಂಗಳೂರು : ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿ. ಕೆ. ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ದೃಢವಾದ ಬಳಿಕ ನಗರದ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾಗಿ ಕಳೆದ ವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಬಿಡುಗಡೆಯಾದ ಬಳಿಕ ವೈದ್ಯರ ಸಲಹೆಯಂತೆ ಮನೆಯಲ್ಲೇ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದರು. ಇದೀಗ ಮತ್ತೆ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.










