ಕೊರೊನಾ ಅಟ್ಟಹಾಸ-ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,604 ಹೊಸ ಪಾಸಿಟಿವ್ ಪ್ರಕರಣ ಪತ್ತೆ…

151
firstsuddi

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,604 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. ಹಾಗೂ ಕಳೆದ 24  ಗಂಟೆಗಳಲ್ಲಿ 122 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ದೇಶದಲ್ಲಿ ಈವರೆಗೆ  2,415 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ 74,281 ಮಂದಿ ಸೋಂಕಿತರ ಪೈಕಿ ಈವರೆಗೆ 24,453 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಹಾಗೂ ಇನ್ನುಳಿದ 47,480ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.