ಕೊರೊನಾ ಅಟ್ಟಹಾಸ-ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,553 ಮಂದಿಗೆ ಸೋಂಕು-72 ಮಂದಿ ಸಾವು…

156
firstsuddi

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,553 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ನಿನ್ನೆ ಒಂದೇ ದಿನ 72 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42,533ಕ್ಕೆ ಏರಿಕೆಯಾಗಿದ್ದು, ಈವರೆಗೆ 1,373 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ 42,533 ಮಂದಿ ಸೋಂಕಿತರ ಪೈಕಿ ಈವರೆಗೆ 11,706 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ ಸೋಂಕಿತರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.