ಕೊರೊನಾ ಅಟ್ಟಹಾಸ-ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,390 ಹೊಸ ಕೊರೊನಾ ಪ್ರಕರಣ ಪತ್ತೆ-83 ಮಂದಿ ಸಾವು…

140
firstsuddi

ನವದೆಹಲಿ : ದೇಶದಲ್ಲಿ ಕಳೆದ 2 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 3,390 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 56,342ಕ್ಕೆ ಏರಿಕೆಯಾಗಿದೆ. ಹಾಗೂ ನಿನ್ನೆ ಒಂದೇ ದಿನ 83 ಮಂದಿ ಕೊರೊನಾ ಸೋಮಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1886ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 56,342 ಮಂದಿ ಸೋಂಕಿತರ ಪೈಕಿ 16,539 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 37,917 ಮಂದಿ ಸೋಂಕಿತರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.