ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಇಡೀ ವಿಶ್ವವೇ ಆತಂಕಕ್ಕೀಡಾಗಿದ್ದು, ವಿಶ್ವದಾದ್ಯಂತ ಒಟ್ಟು 38,20,737 ಮಂದಿ ಮಹಾಮಾರಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ವಿಶ್ವದಾಧ್ಯಂತ ಈವರೆಗೆ 2,65,094 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹಾಗೂ 13,03,146 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಪ್ರಸ್ತುತ 22,52,497 ಮಂದಿ ವಿಶ್ವದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಲ್ಲದೇ 48,208 ಮಂದಿ ಸೋಂಕಿತರ ಸ್ಥಿತಿ ಗಂಭಿರವಾಗಿದೆ.










