ಹೈದರಾಬಾದ್ : ಕೊರೊನಾ ಭಯದಿಂದ ದಂಪತಿ ಸೀಮೆಎಣ್ಣೆ ಸುರಿದು ಬೆಂಕಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂದ್ರದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿ ನಗರದಲ್ಲಿ ನಡೆದಿದೆ. ರಮೇಶ್(30) ಹಾಗೂ ಪತ್ನಿ ವೆಂಕಟಲಕ್ಷ್ಮಿ(26) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದ್ದು, ರಮೇಶ್ ಅವರು ಆಟೋ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರು ಹಾಗೂ ಪತ್ನಿ ವೆಂಕಟಲಕ್ಷ್ಮಿ ಅವರು ತಮಗೆ ಕೊರೊನಾ ಸೋಂಕು ತಗುಲಿರುವುದಾಗಿ ಸಂಶಯ ಬಂದಿದೆ ಹೀಗಾಗಿ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಸೀಮೆಎಣ್ಣೆ ಸುರಿದು ಬೆಂಕಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೂಡಲೇ ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಬರುವಷ್ಟರಲ್ಲಿ ದಂಪತಿ ಬೆಂಕಿಗಾಹುತಿಯಾಗಿದ್ದು, ಈ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.










