ಕೊರೊನಾ ಭೀತಿಯಿಂದ ಊರಿಗೆ ಹೊರಟಿದ್ದ ಮೂವರು ರಸ್ತೆ ಅಪಘಾತಕ್ಕೆ ಬಲಿ…

782
firstsuddi

ಬಾಗಲಕೋಟೆ : ಕೊರೊನಾ ಭೀತಿ ಹಿನ್ನೆಲೆ, ಬೆಂಗಳೂರಿನಿಂದ ಬೀದರ್ ಕಡೆಗೆ ತೆರಳುತ್ತಿದ್ದ ಕಾರು ಬಂಡೆಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಹಿರೇಕೊಡಗಲಿಯಲ್ಲಿ ನಡೆದಿದೆ. ಸವಿತಾ(20), ಸುವರ್ಣ(40) ಹಾಗೂ ಬಸಣ್ಣೆಪ್ಪ(70) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತರು ಕಾರಿನಲ್ಲಿ ಒಟ್ಟು 6ಮಂದಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗಿ ಪತ್ತೆಯಾಗಿದ್ದು, ಈ ಹಿನ್ನೆಲೆ ತಮ್ಮ ಸ್ವಗ್ರಾಮವಾದ ಬೀದರ್ ಜಿಲ್ಲೆಯ ಬಾಲ್ಕಿ ತಾಲ್ಲೂಕಿನ ಕಟಕಚಿಂಚೋಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಹಿರೇಕೊಡಗಲಿ ಬಳಿ ರಸ್ತೆ ತಿರುವು ಗೊತ್ತಾಗದೆ ಕಾರು ಕಲ್ಲು ಬಂಡೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಗಾಯಾಳುಗಳನ್ನು ಇಳಕಲ್ ಆಸ್ಪತ್ರೆಗೆ ಸಾಗಿಸುವ ವೇಳೆ ಇಬ್ಬರು ಮೃತಪಟ್ಟಿದ್ದು, ಇಳಕಲ್ ಆಸ್ಪತ್ರೆಯಿಂದ ಬಾಗಲಕೋಟೆಗೆ ಹೋಗುವ ವೇಳೆ ಇನ್ನೊಬ್ಬರು ಮೃತಪಟ್ಟಿದ್ದು, ಇನ್ನೂ ಮೂವರು ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಳಕಲ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.