ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆ, ರಾಜ್ಯ ಸರ್ಕಾರ ಒಂದು ವಾರಗಳ ಕಾಲ ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರಗಳಲ್ಲಿ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದೆ. ಲಾಕ್‍ಡೌನ್ ಸೂಚನೆ ಇದ್ದರೂ ಕೂಡಾ ಇದನ್ನು ಲೆಕ್ಕಿಸದೆ ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುವವರನ್ನು ತಡೆಯಲು ಸ್ವತಃ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಅಖಾಡಕ್ಕೆ ಇಳಿದಿದ್ದಾರೆ. ಹೊಸಕೋಟೆಯ ಟೋಲ್‍ಗೇಟ್ ಬಳಿ ವಾಹನ ಸವಾರರಿಗೆ ಖಡಕ್ ವಾರ್ನಿಂಗ್ ನೀಡಿದ್ದು, ಅನಾವಶ್ಯಕವಾಗಿ ರಸ್ತೆಗೆ ಇಳಿದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.