ದಾವಣಗೆರೆ : ರಾಜ್ಯದಲ್ಲಿ ಕೊರೊನಾ ಅರ್ಭಟ ಜೋರಾಗಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಮಾಡಲಾಗಿದೆ. ದೇವಸ್ಥಾನಗಳು ಸೇರಿದಂತೆ ಎಲ್ಲಾ ಧಾರ್ಮಿಕ ಕ್ಷೇತ್ರಗಳನ್ನು ಬಂದ್ ಮಾಡಲಾಗಿದೆ. ಈ ಮಧ್ಯೆ ಜಗಳೂರು ಬಿಜೆಪಿ ಶಾಸಕ ಮುಚ್ಚಿದ್ದ ದೇವಸ್ಥಾನಗಳ ಬಾಗಿಲು ತೆರೆಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಲಾಕ್ ಡೌನ್ ನಿಯಮವನ್ನು ಗಾಳಿಗೆ ತೂರಿದ್ದಾರೆ.
ಜಿಲ್ಲೆಯ ಜಗಳೂರು ತಾಲ್ಲೂಕಿನ ಮಾಡ್ರಳ್ಳಿ ಗ್ರಾಮದ ಚೌಡೇಶ್ವರಿ ದೇವಿಗೆ ಬಿಜೆಪಿ ಶಾಸಕ ಎಸ್.ವಿ.ರಾಮಚಂದ್ರಪ್ಪ, ಅವರ ಪತ್ನಿ ಇಂದಿರಾ, ಪುತ್ರ ಅಜಯೇಂದ್ರ ಸಿಂಹ ಸೇರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ.
ಶಾಸಕರ ಈ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಜನಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯನಾ? ಎಂದು ಪ್ರಶ್ನಿಸಿದ್ದಾರೆ.










