ಕೊರೊನಾ ವಿರುದ್ಧ ಹೋರಾಡಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ : ಪ್ರಧಾನಿ ಮೋದಿ.

95
firstsuddi

ನವದೆಹಲಿ: ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇಂದು 7ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಡೀ ಜಗತ್ತು ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ಯೋಗವು ಭರವಸೆಯ ಆಶಾಕಿರಣವಾಗಿದೆ. ಈಗ ಎರಡು ವರ್ಷಗಳಿಂದ, ಭಾರತದಲ್ಲಿ ಅಥವಾ ಪ್ರಪಂಚದಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿಲ್ಲ. ಆದರೆ ಆದರೂ ಜನರಲ್ಲಿ ಯೋಗದ ಬಗ್ಗೆ ಇರುವ ಉತ್ಸಾಹ, ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ ಎಂದರು.

ಈ ಅಂತಾರಾಷ್ಟ್ರೀಯ ಯೋಗ ದಿನದ ‘ಯೋಗಾ ಫಾರ್ ವೆಲ್ನೆಸ್’ ಥೀಮ್ ಜನರನ್ನು ಇನ್ನಷ್ಟು ಪ್ರೋತ್ಸಾಹಿಸಿದೆ. ಪ್ರತಿ ದೇಶ, ಪ್ರದೇಶ ಮತ್ತು ಜನರು ಆರೋಗ್ಯವಾಗಿರಲು ನಾನು ಪ್ರಾರ್ಥಿಸುತ್ತೇನೆ. ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಯೋಗವನ್ನು ರಕ್ಷಾಕವಚವಾಗಿ ಬಳಸಿದ್ದಾರೆ. ಗುಣಪಡಿಸುವ ಪ್ರಕ್ರಿಯೆಯಲ್ಲಿ ಯೋಗ ಸಹಾಯ ಮಾಡುತ್ತದೆ. ವೈದ್ಯರು ಯೋಗವನ್ನು ಸ್ವಯಂ ಅಸ್ತ್ರವಾಗಿ ಬಳಸಿದ್ದಾರೆ ಎಂದರು.

ವಿಶ್ವ ಆರೋಗ್ಯ ಸಂಸ್ಥೆ ಸಹಯೋಗದೊಂದಿಗೆ ಭಾರತ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ ಎಂದಿರುವ ಪ್ರಧಾನಿ ಮೋದಿ ಅವರು, ಈಗ ಎಂ-ಯೋಗ ಅಪ್ಲಿಕೇಶನ್ ಬರಲಿದ್ದು, ಇದು ವಿಶ್ವದಾದ್ಯಂತ ಜನರಿಗೆ ವಿವಿಧ ಭಾಷೆಗಳಲ್ಲಿ ಯೋಗ ತರಬೇತಿ ವಿಡಿಯೋಗಳನ್ನು ಹೊಂದಿರುತ್ತದೆ. ಎಂದು ಮಾಹಿತಿ ನೀಡಿದರು.