ಕೊರೊನಾ ವೈರಸ್ ವಿರುದ್ಧ ಹೋರಾಡಲು ಪಿಎಂ ಪರಿಹಾರ ನಿಧಿಗೆ 2 ವರ್ಷದ ವೇತನವನ್ನು ದೇಣಿಗೆಯಾಗಿ ನೀಡಿದ ಸಂಸದ ಗೌತಮ್ ಗಂಭೀರ್…

173
firstsuddi

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಭಾರತದಲ್ಲಿ 56 ಮಂದಿಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ನಡುವೆ ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ತಮ್ಮ 2 ವರ್ಷಗಳ ವೇತನ ನೀಡುವುದಾಗಿ ತಿಳಿಸಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಗೌತಮ್ ಗಂಭೀರ್ ಅವರು ನೀಡುತ್ತಿರುವ ಎರಡನೇ ದೇಣಿಗೆ ಇದಾಗಿದ್ದು, ಈ ಮೊದಲು ದೆಹಲಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ಸಲಕರಣೆಗಳ ಖರೀದಿಗಾಗಿ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ ಹಣವನ್ನು ನೀಡುವುದಾಗಿ ಘೋಷಿಸಿದ್ದರು.