ಕೊರೊನಾ ಸೋಂಕಿಗೆ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ವಿಧಿವಶ…

111
Firstsuddi

ಭೋಪಾಲ್ : ಖಾಂಡ್ವದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ಅವರು ಕೊರೊನಾದಿಂದಾಗಿ ದೆಹಲಿಯ ಎನ್ ಸಿಆರ್ ನ ಮೆದಂತ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ಜನವರಿ 11 ರಂದು ನಂದಕುಮಾರ್ ಅವರ ಕೋವಿಡ್ ವರದಿ ಪಾಸಿಟಿವ್ ಬಂದಿತ್ತು. ಅವರನ್ನು ದೆಹಲಿ-ಎನ್ ಸಿಆರ್ ನಲ್ಲಿರುವ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನು ನಂದಕುಮಾರ್ ಸಿಂಗ್ ಚೌಹ್ವಾಣ್ ಅವರ ಸಾವಿಗೆ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಮತ್ತು ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

‘ಖಂಡ್ವಾದ ಲೋಕಸಭಾ ಸಂಸದ ನಂದಕುಮಾರ್ ಸಿಂಗ್ ಚೌಹ್ವಾಣ್ ಅವರ ನಿಧನದಿಂದ ಅತೀವ ನೋವಾಗಿದೆ. ಸಂಸತ್ತಿನ ನಡಾವಳಿಗಳು, ಸಾಂಸ್ಥಿಕ ಕೌಶಲ್ಯಗಳು ಮತ್ತು ಮಧ್ಯಪ್ರದೇಶದಾದ್ಯಂತ ಬಿಜೆಪಿಯನ್ನು ಬಲಪಡಿಸುವ ಪ್ರಯತ್ನಗಳಿಗೆ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯ’ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.