ನವದೆಹಲಿ : ರಾಷ್ಟ್ರೀಯ ಲೋಕದಳ (ಆರ್ ಎಲ್ ಡಿ) ಮುಖ್ಯಸ್ಥ ಹಾಗೂ ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್(82) ಕೊರೊನಾ ಸೋಂಕಿನಿಂದ ಇಂದು ನಿಧನರಾಗಿದ್ದಾರೆ.
ಕೊರೊನಾ ಪಾಸಿಟಿವ್ ದೃಢಪಟ್ಟ ಬಳಿಕ ಗುರುಗ್ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶ್ವಾಸಕೋಶದ ಸೋಂಕಿನಿಂದ ಕಳೆದೆರಡು ದಿನಗಳಿಂದ ಅವರ ಸ್ಥಿತಿ ಗಂಭೀರವಾಗಿತ್ತು, ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಮಾಜಿ ಪ್ರಧಾನಿ ಚರಣ್ ಸಿಂಗ್ ಅವರ ಪುತ್ರ ಅಜಿತ್ ಸಿಂಗ್ ಅವರು ಅಮೆರಿಕಾದಲ್ಲಿ ಕಂಪ್ಯೂಟರ್ ಉದ್ಯಮದಲ್ಲಿ 15 ವರ್ಷ ಕೆಲಸ ಮಾಡಿದ್ದರು. ಉತ್ತರ ಪ್ರದೇಶದ ಬಾಗ್ ಪತ್ ಕ್ಷೇತ್ರದಿಂದ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಅಲ್ಲದೇ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.










