ಕೊರೊನಾ ಸೋಂಕಿಗೆ ಹೆದರಿ ಆಸ್ಪತ್ರೆಯ 4ನೇ ಅಂತಸ್ಥಿನ ಕಟ್ಟಡದ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ…

182
firstsuddi

ಗದಗ : ಮಹಾಮಾರಿ ಕೊರೊನಾ ಸೋಂಕಿಗೆ ಹೆದರಿ ವ್ಯಕ್ತಿಯೋರ್ವ ಆಸ್ಪತ್ರೆಯ 4ನೇ ಅಂತಸ್ಥಿನ ಕಟ್ಟಡದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ್‍ನ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಬಸವರಾಜ ಈಳಗೇರ್(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆ, ನಿನ್ನೆ ಕೋವಿಡ್ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿದ ವ್ಯಕ್ತಿ ಆಘಾತಗೊಂಡು ಆಸ್ಪತ್ರೆ ಸಿಬ್ಬಂದಿ ಕಣ್ಣು ತಪ್ಪಿಸಿ ಆಸ್ಪತ್ರೆಯ 4ನೇ ಅಂತಸ್ಥಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.