ಕೊರೊನಾ ಸೋಂಕಿನಿಂದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಸಂಪೂರ್ಣ ಗುಣಮುಖ…

172
firstsuddi

ಮಂಡ್ಯ : ಸಂಸದೆ ಸುಮಲತಾ ಅಂಬರೀಷ್ ಅವರು ಮಹಾಮಾರಿ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಈ ಕುರಿತು ಸ್ವತಃ ಸುಮಲತಾ ಅವರೇ ತಮ್ಮ ಸಾಮಾಜಿಕ ಜಾಲತಾಣದ ಮುಖಾಂತರ ಸ್ಪಷ್ಟನೆ ನೀಡಿದ್ದಾರೆ. ಸಂಸದೆ ಸುಮಲತಾ ಅವರಿಗೆ ಕಳೆದ 3 ವಾರಗಳ ಹಿಂದೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ಹೋಂ ಕ್ವಾರಂಟೈನ್‍ನಲ್ಲಿದ್ದು ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಿದಾಗ ನೆಗೆಟಿವ್ ವರದಿ ಬಂದಿದ್ದು, ಇನ್ನು ಕೆಲವು ದಿನಗಳ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.
ಟ್ವಿಟರ್‍ನಲ್ಲಿ ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ ಕೋವಿಡ್-19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.