ಕೊರೊನಾ ಸೋಂಕು ತಗುಲಿದೆ ಎಂದು ಹೆದರಿ ಆತ್ಮಹತ್ಯೆಗೆ ಶರಣಾದ ವೃದ್ಧ…

173
firstsuddi

ಮಂಡ್ಯ : ತನಗೆ ಕೊರೊನಾ ಸೋಂಕು ತಗುಲಿದೆ ಎಂದು ಆತಂಕಗೊಂಡು ವೃದ್ಧರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮಾರ್ನಾಮಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೊಡ್ಡ ನೀಲ ಹೆಗಡೆ(60) ಆತ್ಮಹತ್ಯೆಗೆ ಶರಣಾದ ವೃದ್ಧ ಎಂದು ಗುರುತಿಸಲಾಗಿದ್ದು, ಮೃತ ವೃದ್ಧರ ಮನೆಗೆ ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬರು ಬಂದು ಹೋಗಿದ್ದರು ಎಂದು ಹೇಳಲಾಗಿದ್ದು, ಅವರನ್ನು ಐಸೋಲೇಷನ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಭಯಗೊಂಡ ವೃದ್ಧ ತನಗೂ ಸೋಂಕು ತಗುಲಿರಬಹುದು ಎಂದು ಭಾವಿಸಿ ತಮ್ಮ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬೆಸಗರಹಳ್ಳಿ ಠಾಣಾ ಪೊಲೀಸರು ಮೃತದೇಹವನ್ನು ಮರದಿಂದ ಕೆಳಗಿಳಿಸಿ ಕೋವಿಡ್ ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.