ಕೊರೊನಾ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಬಗ್ಗೆ ಮುಂದಿನ ಕ್ರಮ : ಸಿಎಂ ಯಡಿಯೂರಪ್ಪ.

87
firstsuddi

ಬೆಂಗಳೂರು : ಕೊರೊನಾ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಬಗ್ಗೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಐದು ಜಿಲ್ಲೆಗಳ ಜನಪ್ರತಿನಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಜೂನ್ 7ರ ತನಕ ಲಾಕ್ ಡೌನ್ ಮುಂದುವರಿಯಲಿದೆ. ಜನರು ಸಹಕರಿಸಿದರೆ ಲಾಕ್ ಡೌನ್ ಮುಂದುವರಿಸುವ ಸಂದರ್ಭ ಉದ್ಭವ ಆಗಲ್ಲ. ಇಲ್ಲದಿದ್ದರೆ ಪರಿಸ್ಥಿತಿ ನೋಡಿ ತೀರ್ಮಾನ ಮಾಡಬೇಕಾಗುತ್ತೆ ಎಂದು ತಿಳಿಸಿದರು.

ಐದು ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ಲಾಕ್ ಡೌನ್ ಮುಂದುವರಿಸುವುದಾ ಎನ್ನುವ ಕುರಿತಾಗಿ ಮೂರು ಗಂಟೆ ಕಾಲ ಚರ್ಚೆ ಮಾಡಿದ್ದೇನೆ. ಪ್ರತಿ ಗ್ರಾಮ ಪಂಚಾಯ್ತಿಗೆ 50 ಸಾವಿರ ಅನುದಾನ ನೀಡಲಾಗುತ್ತದೆ. ಕೋವಿಡ್ ಕಡಿಮೆ ಮಾಡಲು ಸೂಚನೆ ನೀಡಿದ್ದೇನೆ. ಹೆಚ್ಚಿರೋ ಜಿಲ್ಲೆಗಳಲ್ಲಿ ಕಡಿಮೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.