ಕೊಲೆಯಾದ ಹಿಂದೂ ಕಾರ್ಯಕರ್ತನನ್ನು ಭಯೋತ್ಪಾದಕ ಎಂದ ವಿದೇಶಿ ಪತ್ರಕರ್ತ – ಡಿಜಿಪಿ ಪ್ರವೀಣ್ ಸೂದ್ ಪ್ರತಿಕ್ರಿಯೆ…

82
firstsuddi

ಬೆಂಗಳೂರು : ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತನನ್ನು ಭಯೋತ್ಪಾದಕ ಎಂದು ವಿದೇಶಿ ಪತ್ರಕರ್ತನೊಬ್ಬ ಟ್ವೀಟ್ ಮಾಡಿದ್ದನು. ಇದಕ್ಕೆ ಡಿಜಿಪಿ ಪ್ರವೀಣ್ ಸೂದ್ ಅವರು ಪ್ರತಿಕ್ರಿಯಿಸಿದ್ದಾರೆ.

ನವೆಂಬರ್ ತಿಂಗಳಲ್ಲಿ ತ್ರಿಪುರಾದಲ್ಲಿ ಭಯೋತ್ಪಾದಕ ದಾಳಿಯನ್ನು ನಡೆಸಿರುವ ಹಿಂದೂ ಉಗ್ರಗಾಮಿ ಸಂಘಟನೆಯಾಗಿರುವ ಬಜರಂಗದಳಕ್ಕೆ ಸೇರಿದ ಭಯೋತ್ಪಾದಕನನ್ನು ಭಾನುವಾರ ರಾತ್ರಿ ಕೊಲ್ಲಲಾಗಿದೆ ಎಂದು ಸಿಜೆ ವಾರ್ಲೆನ್ ಎಂಬಾತ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದನು.

ಈ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರವೀಣ್ ಸೂದ್, ಇದು ಸಂಪೂರ್ಣ ಸುಳ್ಳು ಸುದ್ದಿ. ಈ ವ್ಯಕ್ತಿಯ ಸಾವಿಗೂ, ಭಯೋತ್ಪಾದನೆಗೂ ಹಾಗೂ ತ್ರಿಪುರಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವ ಮೂಲಕ ವಾರ್ಲೆನ್ ಆರೋಪವನ್ನು ಡಿಜಿಪಿ ನಿರಾಕರಿಸಿದ್ದಾರೆ.