ನಟಿ ಸಂಜನಾ ಗಲ್ರಾನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಾರ್ಕಿಂಗ್ ವಿಚಾರವಾಗಿ ಸ್ಥಳೀಯ ನಿವಾಸಿಗಳ ಜೊತೆ ಗಲಾಟೆ ನಡೆದಿದ್ದು, ಕೊಲೆ ಮಾಡ್ತೀವಿ ಅಂತ ಬೆದರಿಕೆ ಹಾಕಿದ್ದಾರೆ ಎಂದು ಸಂಜನಾ ಇಂದಿರಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇಂದಿರಾನಗರದ ಧೂಪನಹಳ್ಳಿಯಲ್ಲಿ ವಾಸವಾಗಿರುವ ಸಂಜನಾ ಗಲ್ರಾನಿ ಮನೆ ಬಳಿ ಯಶೋಧಮ್ಮ ಹಾಗೂ ರಾಜಣ್ಣ ಎಂಬುವವರ ಮನೆಯೂ ಇದೆ. ಯಶೋಧಮ್ಮ ಹಾಗೂ ರಾಜಣ್ಣ ಎನ್ನುವವರು ರಸ್ತೆಗೆ ಅಡ್ಡಲಾಗಿ ಕಾರುಗಳನ್ನ ನಿಲ್ಲಿಸ್ತಾರಂತೆ. ಇದರಿಂದಾಗಿ ಅಕ್ಕಪಕ್ಕದವರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಸಂಜನಾ ಪ್ರಶ್ನಿಸಿದ್ದಾರೆ.
ಇದಕ್ಕೆ ನಾವು ನಲವತ್ತು ವರ್ಷದಿಂದ ವಾಸ ಇದ್ದೀವಿ. ನಮಗೆ ಇಷ್ಟ ಬಂದಂತೆ ವಾಹನಗಳನ್ನು ನಿಲ್ಲಿಸುತ್ತೇವೆ. ನಮ್ಮನ್ನು ಪ್ರಶ್ನೆ ಮಾಡಿದರೆ ಕೊಲೆ ಮಾಡ್ತೀವಿ ಅಂತ ಆವಾಜ್ ಹಾಕಿದ್ದಲ್ಲದೆ, ವೇಶ್ಯೆ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಂಜನಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ನ್ಯಾಯಲಯದ ಅನುಮತಿ ಮೇರೆಗೆ ಎಫ್ ಐಆರ್ ದಾಖಲಾಗಿದೆ.










