ಬೆಂಗಳೂರು : ಯಡಿಯೂರಪ್ಪ ಅವರು ತಮ್ಮ ಮಗನನ್ನು ಮುಂದೆಬಿಟ್ಟು ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಬಿಜೆಪಿ ಯುವ ಮೋರ್ಚಾ ಪ್ರಧಾನಕಾರ್ಯದರ್ಶಿ ವಿಜಯೇಂದ್ರ ಯಡಿಯೂರಪ್ಪ ಅವರು ತಮ್ಮ ಟ್ವಿಟರ್ ಮೂಲಕ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದು, “ಕಮೀಷನ್ ದಂಧೆ ,ವರ್ಗಾವಣೆ ದಂಧೆ,ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವೆಂಬುದು ಇಡೀ ರಾಜ್ಯಕ್ಕೇ ತಿಳಿದಿದೆ ಕುಮಾರ ಸ್ವಾಮಿಯವರೇ, “ಕೋತಿ ತಾನು ತಿಂದು ಮೇಕೆ ಬಾಯಿಗೆವರೆಸಿ ದಂತಿದೆ “ನಿಮ್ಮ ಮಾತುಗಳು. CBI ತನಿಖೆಗೆ ಹೆದರಿ ಹತಾಶ ಹೇಳಿಕೆ ನೀಡುತ್ತಿದ್ದೀರಿ ವಿಷಯಾಂತರಗೊಳಿಸಿ ಜನತೆಯ ಧಿಕ್ಕು ತಪ್ಪಿಸುವ ಕುತಂತ್ರದ ಮಾತು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ.











